Belagavi NewsBelgaum NewsKannada NewsKarnataka NewsPolitics
*ಕಾಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವರಾಜ ಕದಮ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಯುವರಾಜ ಕದಮ್ ಕಾಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಯುವರಾಜ್ ಕದಮ್ ಅವರು ಇಂದು ಕಾಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಯುವರಾಜ್ ಕದಮ್ ಅವರು, ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಿದರು.

ವಿವಿಧ ಸಂಘ ಸಂಸ್ಥೆಗಳಿಂದ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಕಾಗವಾಡ ಶಾಸಕ ರಾಜು ಕಾಗೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ದರು.