*ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಡಿಸಿ ಜೊತೆ ಚರ್ಚಿಸಿದ ಸಚಿವೆ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕುವೆಂಪು ನಗರದಲ್ಲಿರುವ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೈಣಾಲ ಅವರು ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ಬೆಳಗಾವಿ ಜಿಲ್ಲೆಯ ಖಾನಾಪುರ ಪ್ರದೇಶದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ,ನದಿ ತೀರದ ಗ್ರಾಮಗಳ ಸ್ಥಿತಿಗತಿಗಳ ಬಗ್ಗೆ, ಒಟ್ಟಾರೆ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಮತ್ತು ಕಾಳಜಿ ಕೇಂದ್ರಗಳ ಬಗ್ಗೆ ಡಿಸಿ ಅವರಿಂದ ಮಾಹಿತಿ ಪಡೆದ ಹೆಬ್ಬಾಳಕರ್ ಅವರು ಖಾನಾಪೂರದ ನದಿ ತೀರದ ಗ್ರಾಮಗಳ ಪ್ರವಾಹ ಪರಿಸ್ಥಿತಿ ಪರಶೀಲನೆ ಮಾಡಲು ತೆರಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ