Kannada NewsKarnataka NewsLatest

ಬೆಳಗಾವಿಯಲ್ಲಿ ವಿವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಚಿವ ಹೆಬ್ಬಾರ್

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಕಾರ್ಮಿಕ ಮತ್ತು ಸಕ್ಕರೆ ಸಚಿವ  ಶಿವರಾಮ ಹೆಬ್ಬಾರ್ ಅವರು ಇಂದು ಬೆಳಗಾವಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ ಪಕ್ಷ ಸಂಘಟನೆ ಕುರಿತು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿದರು.

Home add -Advt

ಕೇಂದ್ರ ಸಚಿವ ಸುರೇಶ ಅಂಗಡಿ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸಂಜಯ ಪಾಟೀಲ್  ನಗರಾಧ್ಯಕ್ಷ ಶಶಿಕಾಂತ ಪಾಟೀಲ ಮತ್ತು ಕಾರ್ಯಕರ್ತರು ಹಾಜರಿದ್ದರು.
ನಂತರ ಶಿವರಾಮ ಹೆಬ್ಬಾರ್ ಅವರು  ಬೆಳಗಾವಿಯ ಇ.ಎಸ್.ಐ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಅಭಿವೃದ್ಧಿ ಅಗತ್ಯವಿರುವ ಸೌಕರ್ಯಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ನಂತರ ಬೆಳಗಾವಿ ಜಿಲ್ಲೆಯ ರೈತ ಬೆಳೆಗಾರರೊಂದಿಗೆ ಸಭೆ ನಡೆಸಿ ರೈತರ ಸಮಸ್ಯೆಗಳನ್ನು ಆಲಿಸಿದರು, ರೈತ ಮುಖಂಡರು ಹಾಗೂ ಜಿಲ್ಲೆಯ ವಿವಿಧ ಕಾರ್ಮಿಕ ಸಂಘಟನೆ ಸಚಿವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿದರು.
ನಂತರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳ ಹಾಗೂ ಕಾರ್ಮಿಕ ಮತ್ತು ಸಕ್ಕರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾದ ಬಾಕಿ ಮೊತ್ತ ಹಾಗೂ ಕಬ್ಬು ಬೆಳೆಗಾರರ ಹಾಗೂ ಕಾರ್ಮಿಕ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರ  ಸುರೇಶ ಅಂಗಡಿ ಹಾಗೂ ಸಕ್ಕರೆ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

Related Articles

Back to top button