Kannada NewsKarnataka NewsLatest

*ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು; ಓರ್ವ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ವ್ಯಕ್ತಿಯೋರ್ವ ಸಜೀವ ದಹನವಾಗಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ರಸ್ತೆ ಮಧ್ಯೆಯೇ ಕಾರು ಧಗಧಗನೆ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರಂತ ಸಂಭವಿಸಿದೆ.

Home add -Advt

ನಡು ರಸ್ತೆಯಲ್ಲ್ಲಿಯೇ ಕಾರಿನಲ್ಲಿ ಬೆಂಕಿ ದುರಂತ ಸಂಭವಿಸಿರುವ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಾಲು ಸಾಲು ವಾಹನಗಳು ನಿಂತಿವೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ.


Related Articles

Back to top button