Politics

*ಬಿಜೆಪಿ ರೆಬಲ್ ನಾಯಕರಿಂದ ಮತ್ತೆ ಪ್ರತ್ಯೇಕ ಸಭೆ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಮೀಟಿಂಗ್*

ಪ್ರಗತಿವಾಹಿನಿ ಸುದ್ದಿ: ಮೂರು ಕ್ಷೇತ್ರಗಳ ಉಪಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿ ರೆಬಲ್ ನಾಯಕರು ಮತ್ತೆ ಸಭೆ ನಡೆಸಲು ಮುಂದಾಗಿದ್ದಾರೆ. ಉಪಚುನಾವಣೆಗೂ ಮುನ್ನ ಅಸಮಾಧಾನಿತ ನಾಯಕರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಸಾಲು ಸಾಲು ಸಭೆ ನಡೆಸಿದ್ದರು. ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ಪತ್ತೆ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಇಂದು ಬಿಜೆಪಿ ಸಮಾಧಾನಿತರ ಪ್ರತ್ಯೇಕ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ್, ಅರವಿಂದ ಲಿಂಬಾವಳಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Home add -Advt

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಬೇಕು ಎಂಬ ನಿಟ್ಟಿನಲ್ಲಿ ಈ ಸಭೆ ನಡೆಯಲಿದೆ ಎನ್ನಲಾಗಿದೆ. ಸಭೆ ಬಳಿಕ ಶಾಸಕರಾದ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

Related Articles

Back to top button