Kannada NewsKarnataka NewsNationalPolitics

*ವಕ್ಫ್ ಆಸ್ತಿಗಳಿಗೆ ಖಾತೆ ಮಾಡಿಕೊಡಲು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹಮದ್ ಖಾನ್* 

ಪ್ರಗತಿವಾಹಿನಿ ಸುದ್ದಿ : ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಯ ವಕ್ಫ್ ಆಸ್ತಿಗಳಿಗೆ ಒಂದು ತಿಂಗಳಲ್ಲಿ ಖಾತೆ ಮಾಡಿಕೊಡಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಗಳ ಸಭಾಂಗಣ ದಲ್ಲಿ ಅಧಿಕಾರಿ ಗಳ ಸಭೆ ನಡೆಸಿದ ಅವರು, ವಕ್ಫ್ ಆಸ್ತಿ ಗಳ ವಿಚಾರದಲ್ಲಿ ಅಧಿಕಾರಿಗಳು ಗಂಭೀರ ವಾಗಿ ಪರಿಗಣಿಸಬೇಕು. ಒತ್ತುವರಿ ತಡೆದು ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಕಿ ಇದ್ದ 190 ಆಸ್ತಿಗಳ ಪೈಕಿ 100 ಆಸ್ತಿಗಳ ಖಾತೆ ಗಳನ್ನು ಇದೇ ಸಂದರ್ಭದಲ್ಲಿ ಹಸ್ತಾಂತರ ಮಾಡಲಾಯಿತು. ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ವಕ್ಫ್ ಆಸ್ತಿಗಳ ವಿಚಾರದಲ್ಲಿ ಅರಣ್ಯ ಇಲಾಖೆ ತಗಾದೆ ಇರುವ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ, ಹದಿನೈದು ದಿನಗಳಲ್ಲಿ ಅರಣ್ಯ ಸಚಿವರ ಜತೆ ಈ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಅಧಿಕಾರಿಗಳು ಸಹ ಆಸ್ತಿಗಳಿಗೆ ಖಾತೆ ವಿಚಾರದಲ್ಲಿ ಮಹಾನಗರ ಪಾಲಿಕೆ, ಕಂದಾಯ, ಜಿಲ್ಲಾ ಪಂಚಾಯತ್, ನಗರಾಭಿವೃದ್ಧಿ ಸೇರಿದಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಸಾಧಿಸಿ ಸಮಸ್ಯೆ ಬಗೆಹರಿಸಿ ಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಎರಡೂ ಜಿಲ್ಲೆಯ ವಕ್ಫ್ ಅದಾಲತ್ ನಲ್ಲಿ ಸಲ್ಲಿಕೆಯಾದ ಮನವಿಗಳ ಬಗ್ಗೆಯೂ ಕ್ರಮ ವಹಿಸಲು ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದರು. ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ,ಶಾಸಕರಾದ ಕೋನರೆಡ್ಡಿ, ಅರವಿಂದ್ ಬೆಲ್ಲದ, ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭ,  ಲಕ್ಷ್ಮಿ ಪ್ರಸಾದ್, ಅಲ್ಪಸಂಖ್ಯಾತ ರ ಕಲ್ಯಾಣ ಇಲಾಖೆ ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button