Kannada NewsKarnataka News

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿದ ಸಚಿವೆ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಅಪ್ಪಾಚಿವಾಡಿ – ಜಿಲ್ಲಾ ಪಂಚಾಯತ್ ಬೆಳಗಾವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಿಪ್ಪಾಣಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಪ್ಪಾಚಿವಾಡಿ ಗ್ರಾಮದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ ನಡೆಯಿತು.
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ, ಆಹಾರ ಮತ್ತು ನಾಗರಿಕ ಸರಬರಾಜು  ಹಾಗೂ  ಗ್ರಾಹಕ ವ್ಯವಹಾರಗಳ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಶಶಿಕಲಾ ಜೊಲ್ಲೆೆ,  ಮಕ್ಕಳನ್ನು ಶಿಕ್ಷಣದ ಜೊತೆಗೆ ಹೆಚ್ಚೆಚ್ಚು ಕ್ರೀಡೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಬೇಕು. ಕ್ರೀಡೆಯಿಂದ ಮಕ್ಕಳ ದೈಹಿಕ ಆರೋಗ್ಯ ಬೆಳವಣಿಗೆಯೊಂದಿಗೆ, ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ೦ದು ಹೇಳಿದರು.
ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಚಂದ್ರಕಾಂತ ಕೋಟಿವಾಲೆ, ಉಪಾಧ್ಯಕ್ಷ ಎಂ,ಪಿ ಪಾಟೀಲ್, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಕಾರ್ಯಕರ್ತರು ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button