ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ರೋಗ ಲಕ್ಷಗಳು ಕಂಡುಬಂದಲ್ಲಿ ತಕ್ಷಣ ಚಿಕಿತ್ಸೆಗೆ ಒಳಪಡಬೇಕು ಎಂದರು.
ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ಪ್ರಭೇದ ಪತ್ತೆಯಾಗಿರುವುದರಿಂದ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಾಳೆಯಿಂದ ಅಲ್ಲಿಂದ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31ರವರೆಗೆ ರದ್ದು ಮಾಡಲಾಗಿದೆ. ಈಗಾಗಲೇ 138 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದು, ಅವರೆಲ್ಲರನ್ನೂ ಆರ್ ಟಿಸಿಆರ್ ಟೆಸ್ಟ್ ಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗುವುದು. ನಾಳೆಯಿಂದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಬರುವವರ ಮೇಲೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ