Latest

ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು: ಸಚಿವ ಸುಧಾಕರ್

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಕೊವಿಡ್ ಕಿಟ್ ಖರೀದಿಯಲ್ಲಿ ರಾಜ್ಯ ಸರ್ಕಾರದಿಂದ ಭ್ರಷ್ಟಾಚಾರ ನಡೆದಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಬಿಡಬೇಕು ಎಂದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಕಾಮಾಲೆ ರೋಗದವರಿಗೆ ಕಾಣುವುದೆಲ್ಲ ಹಳದಿ ಎನ್ನುವಂತೆ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿನವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು. ಇಲ್ಲ ಅಂದರೆ ನಾನು ಬಾಯಿ ಬಿಡಬೇಕಾಗುತ್ತೆ. ಯಾರು ಎಲ್ಲೆಲ್ಲಿ ಹೋಗಿದ್ದರು ಯಾರು ಎಲ್ಲಿ ಲೂಟಿ ಮಾಡಿದರು ಅನ್ನೋದು ನನಗೆ ಗೊತ್ತಿದೆ. ಇದನ್ನು ನಾನು ಈಗ ಬಾಯಿ ಬಿಡಬೇಕಾಗುತ್ತದೆ. ಕಾಂಗ್ರೆಸ್ಸಿನವರಿಗೆ ಹಗರಣಗಳು ಮಾಡಿ ಅದೇ ಅಭ್ಯಾಸವಾಗಿದೆ ಎಂದರು.

ಆರೋಗ್ಯ ಇಲಾಖೆಯವರು ಪಿಪಿಇ ಕಿಟ್ ವಿಚಾರದಲ್ಲಿ ಅತ್ಯಂತ ಪಾರದರ್ಶಕವಾಗಿ ಕೆಲಸ ಮಾಡಿದ್ದಾರೆ. ಡಾ. ಮಂಜುನಾಥ್ ಅವರು ಇದನ್ನು ಶಿಫಾರಸು ಮಾಡಿದ್ದಾರೆ. ಸತ್ಯಾಸತ್ಯತೆ ತಿಳಿದು ಆರೋಪ ಮಾಡಲಿ ಎಂದು ಗುಡುಗಿದರು.

ಇನ್ನು ಕೊರೊನಾ ವಿಚಾರದಲ್ಲಿ ಖಾಸಗಿ ಸಂಸ್ಥೆಗಳ ಸಹಕಾರ ಸಿಕ್ಕಿಲ್ಲ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ರಿಪೋರ್ಟ್ ಪೆಂಡಿಗ್ ಇವೆ. ಈ ವಿಚಾರದಲ್ಲಿ ಖಾಸಗಿ ಲ್ಯಾಬ್‍ಗಳು ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಸಹಕರಿಸಿಲ್ಲ. ಹೀಗಾಗಿ ಎಲ್ಲ ಲೋಡ್ ಸರ್ಕಾರಿ ಲ್ಯಾಬ್‍ಗಳ ಮೇಲೆ ಬಿದ್ದ ಪರಿಣಾಮ ವರದಿ ನೀಡುವುದು ವಿಳಂಬವಾಗಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button