Belagavi NewsBelgaum NewsKannada NewsKarnataka NewsNationalPolitics
*ತವರಿನಲ್ಲಿ ಸಚಿವ ಲಕ್ಷ್ಮಣ ಸವದಿಗೆ ಅದ್ಧೂರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವ ಕ್ಷೇತ್ರ ಅಥಣಿ ಪಟ್ಟಣಕ್ಕೆ ಆಗಮಿಸಿದ ಶಾಸಕ ಲಕ್ಷ್ಮಣ ಸವದಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಸೇರಿದಂತೆ ಹಲವು ಮುಖಂಡರು ಅವರಗೆ ಸಾಥ್ ನೀಡಿದರು.
ಸಾವಿರಾರು ಅಭಿಮಾನಿಗಳ ಸಂಭ್ರಮದ ನಡುವೆ ಅಥಣಿ ಪಟ್ಟಣಕ್ಕೆ ಆಗಮಿಸಿದ ಸವದಿಗೆ ಹೂವಿನ ಸುರಿಮಳೆ ಸುರಿಸುವ ಮೂಲಕ ಸ್ವಾಗತಿಸಲಾಯಿತು. ಈ ವೇಳೆ ಅಭಿಮಾನಿಗಳು ಜೈಕಾರ ಹಾಕಿ ಸಂಭ್ರಮಿಸಿದರು. ವಿಶೇಷವಾಗಿ 21 ಅಡಿ ಉದ್ದದ ಬೃಹತ್ ಆಪಲ್ ಹಾರ ಹಾಕಿ ಸವದಿ ಅವರನ್ನು ಅಭಿಮಾನಿಗಳು ಗೌರವಿಸಿದರು.
ನೂತನ ಸಚಿವರಿಗೆ ಶುಭಾಶಯ ಕೋರಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಿಸಿದರು. ಅಥಣಿ ಪಟ್ಟಣದೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸವದಿಯ ಆಗಮನಕ್ಕೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರೆಯಿತು.

