
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿದರು.

ಈ ವೇಳೆ ಅವರು ಕಿಕ್ಕಿರಿದು ಸೇರಿದ್ದ ಜನರ ಸಮಸ್ಯೆಗಳನ್ನು ಆಲಿಸಿ, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.
ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳ ನೂರಾರು ಜನ ಆಗಮಿಸಿ ತಮ್ಮ ಸಮಸ್ಯೆಗಳನ್ನು ಸಚಿವರೆದುರು ಹೇಳಿಕೊಂಡರು. ಅನೇಕ ಜನ ನಾನಾ ಬೇಡಿಕೆಗಳನ್ನು ಮುಂದಿಟ್ಟು ಮನವಿ ಸಲ್ಲಿಸಿದರು.

ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಯುವರಾಜ ಕದಂ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ