Uncategorized

ಜನತಾ ದರ್ಶನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿದರು.

ಈ ವೇಳೆ ಅವರು ಕಿಕ್ಕಿರಿದು ಸೇರಿದ್ದ ಜನರ ಸಮಸ್ಯೆಗಳನ್ನು ಆಲಿಸಿ, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

Home add -Advt

ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳ ನೂರಾರು ಜನ ಆಗಮಿಸಿ ತಮ್ಮ ಸಮಸ್ಯೆಗಳನ್ನು ಸಚಿವರೆದುರು ಹೇಳಿಕೊಂಡರು. ಅನೇಕ ಜನ ನಾನಾ ಬೇಡಿಕೆಗಳನ್ನು ಮುಂದಿಟ್ಟು ಮನವಿ ಸಲ್ಲಿಸಿದರು.

ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಯುವರಾಜ ಕದಂ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

Related Articles

Back to top button