Belagavi NewsBelgaum NewsKannada NewsKarnataka NewsLatest
ಶಿವಾಲಯದಲ್ಲಿ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನ ಶಿವಾಲಯಕ್ಕೆ ಭೇಟಿ ನೀಡಿ ಶಿವನ ಆಶೀರ್ವಾದ ಪಡೆದರು.

ಈ ವೇಳೆ ವಿಶೇಷ ಪೂಜೆ ನೆರವೇರಿಸಿದ ಅವರು, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ವೇಳೆ ದೇಗುಲ ಕಮಿಟಿಯವರು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.
ದೇವಸ್ಥಾನ ಸಮಿತಿ ಸದಸ್ಯರು, ಅರ್ಚಕರು, ಸ್ಥಳೀಯ ಗಣ್ಯರು, ಮಹಿಳೆಯರು ಈ ವೇಳೆ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ