Belagavi NewsKannada NewsKarnataka NewsLatest

ಸಚಿವ ಕೃಷ್ಣ ಭೈರೇಗೌಡ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ ಚರ್ಚೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಗತಿ ಪರಿಶೀಲನಾ ಸಭೆಯ ಸಲುವಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೇಟಿ ಮಾಡಿದರು.

ಈ ವೇಳೆ ಜಿಲ್ಲೆಗೆ ಸಂಬಂಧಿಸಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಿದರು. ಜಿಲ್ಲೆಯ ಸಮಸ್ಯೆಗಳು, ಅವುಗಳ ಪರಿಹಾರ, ಜಿಲ್ಲೆಯ ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ಹೊಸ ಯೋಜನೆಗಳ ಜಾರಿ, ಜನಾನುಕೂಲತೆ ದೃಷ್ಟಿಯಿಂದ ಆಡಳಿತ ವ್ಯವಸ್ಥೆಯ ಸುಧಾರಣೆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಮೂಲಸೌಲಭ್ಯಗಳ ಅಭಿವೃದ್ಧಿ ಇತ್ಯಾದಿಗಳ ಬಗ್ಗೆ ಕೃಷ್ಣ ಭೈರೇಗೌಡ ಅವರೊಂದಿಗೆ ಸಮಾಲೋಚಿಸಲಾಯಿತು.

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಹಾಗೂ ಇನ್ನಿತರ ಗಣ್ಯರು ಹಾಜರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button