ತೆಲಂಗಾಣ ಚುನಾವಣೆ ಪ್ರಚಾರಕ್ಕೆ ಸಿಎಂ ಜೊತೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್


ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ತೆಲಂಗಾಣ ವಿಧಾನ ಸಭೆ ಚುನಾವಣೆ ಪ್ರಚಾರಕ್ಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ವಿಶೇಷ ವಿಮಾನದಲ್ಲಿ ತೆರಳಿದರು.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮಕ್ಥಲ್ ನಲ್ಲಿ ಆಯೋಜಿಸಲಾಗಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ತೆಲಂಗಾಣ ರಾಜ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಪ್ರಯಾಣ ಬೆಳೆಸಿದರು.

ತೆಲಂಗಾಣಕ್ಕೆ ತೆರಳುವ ಮುನ್ನ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲದೆ, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಜೊತೆಗೂ ಮುಖ್ಯಮಂತ್ರಿಗಳು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ