Belagavi NewsBelgaum NewsKannada NewsKarnataka NewsLatest

ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಣ: ಮೃಣಾಲ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ಜನತೆ ಅವರೊಂದಿಗೆ ನಿಂತು ಸಹಕಾರ ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಜ್ಯೋತಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಗಾವಧನಿ ಹಾಗೂ ಕಾಳಿಕಾ ದೇವಿ ಮಂದಿರಗಳ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಭಾಗವಹಿಸಿ ಅವರು ಮಾತನಾಡಿದರು. ಶಾಸಕರಾಗುವ ಮೊದಲಿನಿಂದಲೂ ಕ್ಷೇತ್ರಕ್ಕಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿಯನ್ನೇ ಕಾಣದ ಕ್ಷೇತ್ರಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ. ಶಾಸಕರಾಗಿ, ಸಚಿವರಾಗಿ ಹಲವಾರು ಯೋಜನೆಗಳನ್ನು ತಂದಿದ್ದಾರೆ. ಸಚಿವ ಸ್ಥಾನದ ಜವಾಬ್ದಾರಿ ಇದ್ದರೂ ಕ್ಷೇತ್ರವನ್ನು ಮರೆಯದೆ ನಿರಂತರವಾಗಿ ಅಭಿವೃದ್ಧಿಪಡಿಸುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ನಾನು ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಗ್ರಾಮೀಣ ಕ್ಷೇತ್ರದಲ್ಲಿ 125ಕ್ಕೂ ಹೆಚ್ಚು ಮಂದಿರಗಳ ನಿರ್ಮಾಣ ಇಲ್ಲವೇ ಜೀರ್ಣೋದ್ಧಾರ ಮಾಡಲಾಗಿದೆ. ಪ್ರತಿ ಊರಲ್ಲಿ ಒಂದಿಲ್ಲೊಂದು ದೇವಸ್ಥಾನ, ಸಮುದಾಯ ಭವನಗಳು ತಲೆ ಎತ್ತಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಯೋಜನೆಗಳನ್ನು ತರಲು ಎಲ್ಲರ ಬೆಂಬಲ ಅಗತ್ಯವಿದೆ ಎಂದು ಮೃಣಾಲ ಹೇಳಿದರು.

ಕಾರ್ಯಕ್ರಮದಲ್ಲಿ ಯುವರಾಜ ಕದಂ, ಮನೋಹರ್ ಬೆಳಗಾಂವ್ಕರ್, ಸಾಗರ್ ಲಾಖೆ, ನಾಮದೇವ್ ಮೋರೆ ಸೇರಿದಂತೆ ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು, ದೇವಸ್ಥಾನ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button