LS����
Kannada NewsKarnataka NewsNationalPolitics

*ವಯನಾಡ್ ಭೂಕುಸಿತ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದಿಂದ 70ಕ್ಕೂ ಜನರು  ಸಾವನ್ನಪ್ಪಿರುವ ಘಟನೆ ನನ್ನ ಮನಸ್ಸಿಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. 

ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರು ಜೀವಂತವಾಗಿ ಹೊರಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.  ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲಿ.  ಮೃತರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಬಹುತೇಕ ಕಡೆ ಹೆಚ್ಚು ಮಳೆಯಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button