Film & EntertainmentKannada NewsKarnataka News

ಹಿರಿಯ ನಟಿ ಡಾ.ಲೀಲಾವತಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖ್ಯಾತ ನಟಿ ಲೀಲಾವತಿ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 50 ವರ್ಷಗಳ ಕಾಲ ಕನ್ನಡ ಚಿತ್ರರಂಗಕ್ಕೆ ಸುದೀರ್ಘ ಸೇವೆ ಸಲ್ಲಿಸಿದ್ದ ಲೀಲಾವತಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು.  ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸದಾಕಾಲ ರೈತರ ಬಗ್ಗೆ ಕಾಳಜಿ ಹೊಂದಿದ್ದರು. ತಮ್ಮದೇ ಹಣದಲ್ಲಿ ಪಶುಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಿಸಿದ್ದರು ಎಂದು ಸ್ಮರಿಸಿರುವ ಸಚಿವರು,  ಅವರ ನಿಧನದ ಸುದ್ದಿ ಕೇಳಿ ನೋವಾಯಿತು ಎಂದಿದ್ದಾರೆ.

 ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button