Cancer Hospital 2
Beereshwara 36
LaxmiTai 5

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂಡೋಳಿ ಗ್ರಾಮಸ್ಥರಿಂದ ಸತ್ಕಾರ

Anvekar 3

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಂಡೋಳಿ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸತ್ಕರಿಸಿದರು.

Emergency Service

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ “ದ್ವಿತೀಯ ಬಾರಿಗೆ ವಿಧಾನಸಭೆಗೆ ಆಯ್ಕೆ ಮಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಸ್ತ ಜನತೆಗೆ ನಾನು ಋಣಿಯಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದಿಂದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನೂರಾರು ಅಭಿವೃದ್ಧಿ ಕೆಲಸಗಳ ಮೂಲಕ ಮತ್ತೆ ನಿಮ್ಮ ಮುಂದೆ ಬರಲಿದ್ದೇನೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ, ಸುವರ್ಣ ಹೊಸಕೋಟಿ, ಲಕ್ಷ್ಮೀ ಕಣಬರಕರ್, ಶಂಕರ ಪಾಟೀಲ, ಮಾರುತಿ ಪಾಟೀಲ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Bottom Add3
Bottom Ad 2