Kannada NewsKarnataka NewsLatest

ಸಭಾತ್ಯಾಗ ಮಾಡಿದ ಬಿಜೆಪಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ 

 ಪ್ರಗತಿವಾಹಿನಿ ಸುದ್ದಿ,*ಬೆಂಗಳೂರು* : ಬಜೆಟ್ ವೇಳೆ  ಸಭಾ ತ್ಯಾಗ ಮಾಡಿದ ವಿರೋಧ ಪಕ್ಷಗಳ  ವಿರುದ್ಧ ಕಿಡಿ ಕಾಡಿರುವ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಹಾಗೂ ಜೆಡಿ ಎಸ್ ಸದಸ್ಯರು ಸದನದ ಗೌರವಕ್ಕೆ ದಕ್ಕೆ ತಂದಿದ್ದಾರೆ. 

ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಎಲ್ಲಾ ಕ್ಷೇತ್ರಗಳಿಗೆ ಸಮಾನಾಗಿ ಅನುದಾನ ಹಂಚಿಕೆ ಮಾಡಿದ್ದಾರೆ. ಅವರದ್ದೆ (ಬಿಜೆಪಿ) ಸರ್ಕಾರ ಕೇಂದ್ರದಲ್ಲಿದ್ದು, ಜಿಎಸ್ ಟಿ ಸೇರಿದಂತೆ ಇನ್ನಿತರ ಯಾವುದೇ ಅನುದಾನ ಬಿಡುಗಡೆ ಮಾಡಲು ಒತ್ತಡ ಹೇರಿಲ್ಲ. ಬದಲಿಗೆ ರಾಜಕೀಯ ಮಾಡಿಕೊಂಡೇ ಬಂದಿದ್ದಾರೆ ಎಂದು ಸಚಿವರು ಆರೋಪಿಸಿದರು.

ರಾಜ್ಯದಲ್ಲಿ ಎದುರಾಗಿರುವ  ಬರಗಾಲದ ನಡುವೆಯೂ ಸಿಎಂ ಸಿದ್ದರಾಮಯ್ಯ 3 ಲಕ್ಷದ 71 ಸಾವಿರದ 383 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಜನಪ್ರಿಯ ಬಜೆಟ್ ಗೆ ಬಿಜೆಪಿ ಅವಮಾನ ಮಾಡಿದೆ. ಮುಂದಿನ ದಿನಗಳಲ್ಲಿ ಜನರೇ ಇದಕ್ಕೆ ಉತ್ತರ ನೀಡುವರು. ಯಾವುದೇ ಒಂದು ಸಮುದಾಯವನ್ನು ಒಲೈಸುವ ಬಜೆಟ್ ಇದಾಗಿಲ್ಲ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button