Kannada NewsKarnataka NewsLatest

ವಿಕಲ ಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

* *ಸಚಿವರ ಭರವಸೆ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದ ವಿಕಲ ಚೇತನರು* 

ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* : ವಿಕಲ ಚೇತನರ ಬಹುದಿನಗಳ ಪ್ರಮುಖ ಬೇಡಿಕೆಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳದಲ್ಲೇ ಆದೇಶ ಹೊರಡಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ನೀಡಿದ್ದಾರೆ. 

Home add -Advt

ಫ್ರೀಡಂ ಪಾರ್ಕ್‌ನಲ್ಲಿ ವಿಕಲ ಚೇತನರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸಿದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಪ್ರಮುಖ ಎರಡು ಬೇಡಿಕೆಗಳಿಗೆ ಸ್ಥಳದಲ್ಲೇ ಪರಿಹಾರ ಆದೇಶ ಹೊರಡಿಸಿದ್ದಾರೆ. 

 *ಸ್ಥಳದಲ್ಲೇ ಆದೇಶ ನೀಡಿದ ಸಚಿವರು:* 

 *ಆದೇಶ: 1:* ಮಹಿಳಾ ಪುನರ್ವಸತಿ ಕಾರ್ಯಕರ್ತೆಯರಿಗೆ ವೇತನ ಸಹಿತ ಹೆರಿಗೆ ರಜೆ, ಆರು ತಿಂಗಳು, ಗರ್ಭಪಾತ ರಜೆ 45 ದಿನ.

 *ಆದೇಶ: 2:* ಹೊಸದಾಗಿ ರಚನೆಗೊಂಡಿರುವ 51 ತಾಲೂಕುಗಳಿಗೆ  ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್ ಡಬ್ಲ್ಯೂ) ನೇಮಕಾತಿ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಶಿಫಾರಸು.

 *ಮುಂದಿನ ವಾರ ಸಿಎಂ ಜೊತೆ ಚರ್ಚೆ* 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಕಲಾಂಗ ಚೇತನರ ಸಮಸ್ಯೆಗಳಿಗೆ ಸರ್ಕಾರ ಶೀಘ್ರವೇ ಪರಿಹಾರ ನೀಡಲಿದೆ. ಈ ಸಂಬಂಧ ಮಾರ್ಚ್ 13 ಅಥವಾ 14 ರಂದು ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವಿಕಲ ಚೇತನರ ಉಳಿದ ಬೇಡಿಕೆಗಳನ್ನೂ ಈಡೇರಿಸಲಾಗುವುದು ಎಂದು ಸಚಿವರು ಹೇಳಿದರು. 

 *ಧರಣಿ ವಾಪಸ್ ಪಡೆದ ಪ್ರತಿಭಟನಾಕಾರರು*

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

Related Articles

Back to top button