ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತುಲಾಭಾರದ ವೇಳೆ ಆದ ಅವಘಡದ ಹಿನ್ನೆಲೆಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳ ಆರೋಗ್ಯದ ಕುರಿತಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀಗಳ ಆರೋಗ್ಯ ವಿಚಾರಿಸಿದರು.
ಶ್ರೀಗಳ ಆಪ್ತ ಸಹಾಯಕರಿಗೆ ಕರೆ ಮಾಡಿ ಸ್ವಾಮೀಜಿಗಳ ಆರೋಗ್ಯ ಕುರಿತಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದರು. ಶ್ರೀಗಳಿಗೆ ಸಣ್ಣ ಗಾಯವಾಗಿದ್ದು, ಗಾಭರಿಪಡುವಂತದ್ದು ಏನಿಲ್ಲ . ಈಗ ಆರೋಗ್ಯವಾಗಿದ್ದು, ನವದೆಹಲಿಯಿಂದ ಅಯೋಧ್ಯೆಯತ್ತ ಶ್ರೀಗಳು ಪ್ರಯಾಣಿಸುತ್ತಿದ್ದಾರೆ ಎಂದು ಆಪ್ತಸಹಾಯಕರು ತಿಳಿಸಿದರು ಎಂದು ಸಚಿವರು ತಿಳಿಸಿದ್ದಾರೆ.
ಶ್ರೀಗಳಿಗೆ ದೇವರು ಹೆಚ್ಚಿನ ಆಯುಷ್ಯ, ಆರೋಗ್ಯ ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ