Kannada NewsLatest

ಬೆಳಗಾವಿ ಸೇರಿದಂತೆ 5 ಜಿಲ್ಲೆಗಳಲ್ಲಿ ನಾಳೆಯಿಂದ ಕೋವಿಡ್ ಲಸಿಕೆ ಡ್ರೈರನ್ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು.

Home add -Advt

ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ  ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆಯಿಂದ ನಡೆಯಲಿರುವ ವ್ಯಾಕ್ಸಿನ್ ತಾಲೀಮಿಗೆ ಎಲೆಕ್ಷನ್ ಮಾದರಿಯಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Related Articles

Back to top button