Kannada NewsKarnataka NewsLatestPolitics

*ಮೈಸೂರು ದಸರಾದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

ಪ್ರಗತಿವಾಹಿನಿ ಸುದ್ದಿ: ವಿಶ್ವ ಪ್ರಸಿದ್ಧ  ಮೈಸೂರು ದಸರಾ ಮಹೋತ್ಸವದ ಮೊದಲ ದಿನವಾದ ಸೋಮವಾರ ಅರಮನೆ ಆವರಣದಲ್ಲಿ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇದೇ ವೇಳೆ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಸಂಸದರಾದ ಸುನೀಲ್ ಬೋಸ್, ತನ್ವೀರ್ ಸೇಠ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಡಿ.ರವಿಶಂಕರ್, ಅನಿಲ್ ಕುಮಾರ್, ಟಿ. ಎಸ್. ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಿ.ತಿಮ್ಮಯ್ಯ  ಸೇರಿದಂತೆ ಹಲವರು ಉಪಸ್ಥಿತರಿದ್ದರು.

Home add -Advt

Related Articles

Back to top button