
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದಲ್ಲಿ ನವರಾತ್ರಿಯ ಪ್ರಯುಕ್ತವಾಗಿ ಭಾನುವಾರ ಹಮ್ಮಿಕೊಂಡಿರುವ ನವರಾತ್ರಿಯ ಉತ್ಸವದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ದುರ್ಗಾ ಮಾತೆಗೆ ಪೂಜೆಯನ್ನು ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ನಂತರ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ನೀಡಿದರು.