Latest

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಒಪ್ಪದಿದ್ದಾಗ ಬೆಂಕಿ ಹಚ್ಚಿದ ಪಾಪಿ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಸಂತ್ರಸ್ತ ಬಾಲಕಿ ಚಿಕಿತ್ಸೆ ಫಲಿಸದೇ ಕೊನೆಗೂ ಸಾವನ್ನಪ್ಪಿದ್ದಾಳೆ.

ತೆಲಂಗಾಣದ ಖಮ್ಮಮ್ ನಗರದಲ್ಲಿ ಕಳೆದ ತಿಂಗಳು ಮನೆ ಕೆಲಸಕ್ಕಿದ್ದ 13 ವರ್ಷದ ಬಾಲಕಿ ಮೇಲೆ ಮನೆ ಮಾಲೀಕನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದಕ್ಕೆ ಬಾಲಕಿ ಒಪ್ಪದಿದ್ದಾಗ ಆಕೆಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲು ಮುಂದಾಗಿದ್ದಾನೆ. ಶೇ.70ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದ ಬಾಲಕಿಯನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಂದು ತಿಂಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

Home add -Advt

Related Articles

Back to top button