*ದೇವಸ್ಥಾನದ ಕಳಸಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕರಿಸಿದ್ದೇಶ್ವರ ಮತ್ತು ಜಡಿಸಿದ್ಧೇಶ್ವರ ದೇವಸ್ಥಾನದ ವಾಸ್ತು ಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಸಂಜೆ ಉದ್ಘಾಟಿಸಿದರು.  ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಿದ ಗ್ರಾಮಸ್ಥರ ಕಾರ್ಯವನ್ನು ಶ್ಲಾಘಿಸಿದ ಸಚಿವರು, ಗ್ರಾಮದ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವಂತೆ ವಿನಂತಿಸಿದರು. ಶಾಸಕಿಯಾದ ನಂತರ ಮತ್ತು ಸಚಿವೆಯಾದ ನಂತರ ಗ್ರಾಮಕ್ಕೆ ಬಹಳಷ್ಟು ಯೋಜನೆಗಳನ್ನು ತರಲಾಗಿದೆ. ಅಭಿವೃದ್ಧಿ ನಿರಂತರ ಮುಂದುವರಿಯಲಿದೆ. … Continue reading *ದೇವಸ್ಥಾನದ ಕಳಸಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*