Belagavi NewsBelgaum NewsKannada NewsKarnataka NewsLatestPolitics

*ಲಕ್ಷ್ಮೀ ಹೆಬ್ಬಾಳಕರ್ ಫೇಸ್‌ಬುಕ್ ಪೇಜ್‌ಗೆ 5 ಲಕ್ಷ ಫಾಲೋವರ್ಸ್: ಅಭಿಮಾನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧಿಕೃತ ಫೇಸ್‌ಬುಕ್ ಪೇಜ್‌ ಅನ್ನು ಅನುಸರಿಸುವವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ.

Home add -Advt

ಸಾಮಾಜಿಕ ಜಾಲತಾಣಗಳ ಮೂಲಕ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು, ಸರ್ಕಾರದ ಯೋಜನೆಗಳು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಜನಪರ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದು, ಅದಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು, “ಸಾರ್ವಜನಿಕ ಸೇವೆ ಮತ್ತು ಸಂವೇದನಾಶೀಲ ಹಾದಿಯಲ್ಲಿ ನನ್ನ ಫೇಸ್‌ಬುಕ್ ಪುಟ ಇಂದು ಮತ್ತೊಂದು ಮೈಲಿಗಲ್ಲನ್ನು ದಾಟಿದೆ. ಇದು ಕೇವಲ ಸಂಖ್ಯೆಯಲ್ಲ, ನನ್ನ ಮೇಲೆ ನೀವು ಇಟ್ಟಿರುವ ನಂಬಿಕೆ ಮತ್ತು ಜವಾಬ್ದಾರಿಯ ಸಂಕೇತ. ಪ್ರತಿಯೊಂದು ಹರಕೆ, ಬೆಂಬಲ ಮತ್ತು ಪ್ರೋತ್ಸಾಹಕ್ಕೂ ಹೃದಯಪೂರ್ವಕ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಯೋಜನೆಗಳು ಹಾಗೂ ಜನಪರ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕಾರ್ಯ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ಸಚಿವೆಯ ಫೇಸ್‌ಬುಕ್ ಪೇಜ್ 5 ಲಕ್ಷ ಫಾಲೋವರ್ಸ್ ದಾಟಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Back to top button