*ನಿಯೋಜನೆ ನಿರ್ಧಾರಕ್ಕೆ ತಡೆ: ತ್ವರಿತ ನಿರ್ಧಾರ ಕೈಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಧನ್ಯವಾದ ಸಲ್ಲಿಸಿದ ನೌಕರರ ಸಂಘದ ಗೌರವಾಧ್ಯಕ್ಷೆ ವರಲಕ್ಷ್ಮೀ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೀಕ್ಷಣಾಲಯ ಮತ್ತು ಪ್ಲೇಸ್ ಆಫ್ ಸೇಫ್ಟಿ ಸಂಸ್ಥೆಗಳಿಗೆ ಅಗತ್ಯವಿರುವ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮೇಲೆ ಪಡೆಯಲು ಅಗತ್ಯವಿರುವ ಹುದ್ದೆಗಳನ್ನು ಸೃಜನೆ ಮಾಡುವ ಕುರಿತಾದ ಆದೇಶಕ್ಕೆ ತಡೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಯಂಮೇತರ ನೌಕರರ ಒಕ್ಕೂಟ (ರಿ) ಮತ್ತು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂಮೇತರ ನೌಕರರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದೆ.
ಸಂಘದ ಗೌರವಾಧ್ಯಕ್ಷರೂ ಆಗಿರುವ ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ, ಅಧ್ಯಕ್ಷ ಭಾರತೀಶ ಶೀಲವಂತರ ಹಾಗೂ ಪ್ರಧಾನ ಕಾರ್ಯದರ್ಶಿ ಕಾಂತರಾಜು ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪತ್ರ ಬರೆದಿದ್ದಾರೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ವೀಕ್ಷಣಾಲಯ ಮತ್ತು ಪ್ಲೇಸ್ ಆಫ್ ಸೇಫ್ಟಿ ಸಂಸ್ಥೆಗಳಿಗೆ ಅಗತ್ಯವಿರುವ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮೇಲೆ ಪಡೆಯಲು ಅಗತ್ಯವಿರುವ ಹುದ್ದೆಗಳನ್ನು ಸೃಜನೆ ಮಾಡುವ ಕುರಿತಾದ ಸರ್ಕಾರದ ಆದೇಶ (ಸಂಖ್ಯೆ ಮಮಇ 14 ಮಭಾಬ 2023 ಬೆಂಗಳೂರು, ದಿನಾಂಕ 28-12-2023)ಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ತಡೆ ನೀಡಲಾಗಿದೆ.
ಆದೇಶಕ್ಕೆ ತಡೆ ನಿಡಿರುವುದಕ್ಕೆ ಸಂಘದ ವತಿಯಿಂದ ಹೃತ್ತೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ಸದರಿ ಆದೇಶವನ್ನು ರದ್ದುಪಡಿಸಲು ತಮ್ಮಲ್ಲಿ ಕೋರುತ್ತೇವೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ