
ಕೊಲ್ಲೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಮಧ್ಯಾಹ್ನ 1.30ರ ವೇಳೆ ಆಗಮಿಸಿದ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸ್ವಾಗತಿಸಲಾಯಿತು. ನಾಡಿನ ಒಳಿತಿಗಾಗಿ ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಸತ್ಕರಿಸಲಾಯಿತು. ಕುಟುಂಬ ಸದಸ್ಯರೊಂದಿಗೆ ಭೋಜನ ಸ್ವೀಕರಿಸಿದರು.

ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು
ಸಚಿವರನ್ನು ದೇವಸ್ಥಾನದ ಆವರಣದಲ್ಲಿ ಕಂಡ ತಕ್ಷಣ ಅಭಿಮಾನಿಗಳು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಸಚಿವರ ಭೇಟಿ ಹಿನ್ನೆಲೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ