
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಮೃದ್ಧ ವಿಕಲಚೇತನರ ಸಂಸ್ಥೆಯ ವತಿಯಿಂದ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮೃದ್ಧ ವಿಕಲಚೇತನರ ಸಂಸ್ಥೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಅಂಧರಿಗೆ ಸ್ವಯಂ ಉದ್ಯೋಗಗಳನ್ನು ನೀಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿದೆ. ಸಂಸ್ಥೆಯ ಈ ಕಾರ್ಯ ಪ್ರಶಂಸನೀಯವಾಗಿದ್ದು, ಸಂಸ್ಥೆಗೆ ಸರ್ಕಾರದಿಂದ ಲಭ್ಯವಾಗುವ ಯೋಜನೆಗಳನ್ನು ರೂಪಿಸಿ ಕೊಡುವುದಾಗಿ ಸಚಿವರು ಈ ವೇಳೆ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಮೃದ್ಧ ಅಂಗವಿಕಲರ ಸಂಸ್ಥೆಯ ಅಧ್ಯಕ್ಷ ಶಿವನಗೌಡ ಪಾಟೀಲ್, ಕಾರ್ಯದರ್ಶಿ ಪ್ರಶಾಂತ್ ಪೋತದಾರ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.