*ಊಟವನ್ನೂ ಮಾಡದೆ ಸ್ವತಃ ಸ್ಥಳಕ್ಕೆ ತೆರಳಿ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸುಳಗಾ ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸ್ವತಃ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಸೋಮವಾರ ಬೆಳಗ್ಗೆ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಉಚಗಾವಿಯಲ್ಲಿ ನರೇಗಾ ಕಾರ್ಮಿಕರ ಜೊತೆ ಸಂವಾದ ನಡೆಸಿದ ಸಚಿವರು, ಊಟವನ್ನೂ ಮಾಡದೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಸುಳಗಾ ಗ್ರಾಮಕ್ಕೆ ತೆರಳಿದರು. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಗುತ್ತಿಗೆದಾರರನ್ನು ಕರೆಸಿ, ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ರಸ್ತೆಗೆ ಪೇವರ್ಸ್ ಅಳವಡಿಸುವ ಕಾಮಗಾರಿಯನ್ನು ಪರಿಶೀಲಿಸಿದರು.

ಕಾಮಗಾರಿಯ ಬಗ್ಗೆ ಅನೇಕ ಸಲಹೆ -ಸೂಚನೆಗಳನ್ನು ನೀಡಿದ ಅವರು ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಆಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಸಚಿವರು ಮನೆಗೆ ಬಂದಾಗ ಸಂಜೆ 4.30 ಆಗಿತ್ತು. ಆಗಲೂ ಮನೆಯ ಬಳಿ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ನಂತರ ಊಟಕ್ಕೆ ತೆರಳಿದರು




