ವಿವಿಧೆಡೆ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ನಾಡಿನ ಒಳಿತಿಗಾಗಿ ಪ್ರಾರ್ಥನೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವಿವಿಧೆಡೆ ಜಾತ್ರೆ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಭಾಗಿಯಾಗಿ, ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಮಾಸ್ತಮರ್ಡಿ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.

ನಂತರ ಹಿರೇಬಾಗೇವಾಡಿ ಗ್ರಾಮದಲ್ಲಿ ಸುಮಾರು 25 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಪಡಿಬಸವೇಶ್ವರ ಹಾಗೂ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ನಂತರ ಜಾತ್ರೆಯಲ್ಲಿ ಸಾಂಪ್ರದಾಯಿಕವಾಗಿ ಬಳೆ ಇಟ್ಟುಕೊಂಡು ಭಕ್ತಿ ಮೆರೆದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಲೋಕಸಭಾ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮತ್ತಿತರರು ಇದ್ದರು.



ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ