GIT add 2024-1
Kore@40
Beereshwara 33

ವಿವಿಧೆಡೆ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ನಾಡಿನ ಒಳಿತಿಗಾಗಿ ಪ್ರಾರ್ಥನೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವಿವಿಧೆಡೆ ಜಾತ್ರೆ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. 

​ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ​ಲ್ಲಿ ಕುಟುಂಬದ ಸದಸ್ಯರೊಂದಿಗೆ ​ಭಾಗಿಯಾಗಿ​, ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.​  ಮಾಸ್ತಮರ್ಡಿ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂ​ಡು ಪೂಜೆ ಸಲ್ಲಿಸಿದರು. 

​ ನಂತರ ಹಿರೇಬಾಗೇವಾಡಿ ಗ್ರಾಮದಲ್ಲಿ ಸುಮಾರು 25 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಪಡಿಬಸವೇಶ್ವರ ಹಾಗೂ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂ​ಡು ವಿಶೇಷ ಪೂಜೆ ಸಲ್ಲಿಸಿ​, ಆಶೀರ್ವಾದ ಪಡೆದರು.​ ನಂತರ ಜಾತ್ರೆಯಲ್ಲಿ  ಸಾಂಪ್ರದಾಯಿಕವಾಗಿ ಬಳೆ ಇಟ್ಟುಕೊಂಡು​ ಭಕ್ತಿ ಮೆರೆದರು. 

Emergency Service

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಲೋಕಸಭಾ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಮತ್ತಿತರರು ಇದ್ದರು.

Laxmi Tai add
Bottom Add3
Bottom Ad 2