Kannada NewsKarnataka NewsLatest

ಸುತ್ತೂರು ಶ್ರೀಗಳ ಆಶಿರ್ವಾದ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಮೈಸೂರು: ಗೃಹಲಕ್ಷ್ಮೀ ಯೋಜನೆಯ ಪೂರ್ವಸಿದ್ಧತೆಗೆಂದು ಮೈಸೂರಿಗೆ ತೆರಳಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಇದೇ 30ರಿಂದ ಮೈಸೂರಲ್ಲಿ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಗೆಂದು ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಮೈಸೂರಿಗೆ ತೆರಳಿದ್ದಾರೆ. ಸಭೆ ಮುಗಿದ ಬಳಿಕ ಸುತ್ತೂರು ಮಠಕ್ಕೆ ತೆರಳಿ ಶ್ರೀಗಳ ಆಶಿರ್ವಾದ ಪಡೆದರು.

Home add -Advt

ಈ ವೇಳೆ ಮಠದ ಆಡಳಿತಾಧಿಕಾರಿ ಬೆಟ್ ಸೂರಮಠ್ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related Articles

Back to top button