Kannada NewsKarnataka NewsNational

*ಕೇಂದ್ರದ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ* 

* ಪ್ರಗತಿವಾಹಿನಿ ಸುದ್ದಿ, *ನವದೆಹಲಿ:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ‌ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 

 ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪೂರೈಕೆ ಆಗಬೇಕಿರುವ ಅಕ್ಕಿ, ಗೋಧಿ, ಅನುದಾನ ಹಾಗೂ ಅಂಗನವಾಡಿ FRS ಗಳಲ್ಲಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಸಲಾಯಿತು.

ಈ ವೇಳೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಅನಿಲ್ ಮಲ್ಲಿಕ್, ಹೆಚ್ಚುವರಿ ಕಾರ್ಯದರ್ಶಿಗಳಾದ ಪ್ರೀತಮ್ ಯಶವಂತ, ಜ್ಞಾನೇಶ್ ಭಾರತಿ,  ಕಾರ್ಯದರ್ಶಿಗಳಾದ ಶ್ಯಾಮ್ಲಾ ಇಕ್ಬಾಲ್, ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಬಿ.ಎಚ್. ಉಪಸ್ಥಿತರಿದ್ದರು.

Home add -Advt

Related Articles

Back to top button