Belagavi NewsBelgaum NewsKannada NewsKarnataka News

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ : ಧರಣಿ ವಾಪಸ್ ಪಡೆದ ವಿಕಲ ಚೇತನರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಮಂಗಳವಾರ ಸಂಜೆ ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಕಲಚೇತನರು ಧರಣಿ ವಾಪಸ್ ಪಡೆದರು.

ಧರಣಿ ಸ್ಥಳಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ರಾಜ್ಯದ 6860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಹುದ್ದೆಗಳನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅವರು ಸಚಿವರಿಗೆ ಮನವಿ ಸಲ್ಲಿಸಿದರು.

ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜತೆ ​ಈ​ ಕುರಿತು ​ಚರ್ಚಿಸುತ್ತೇನೆ. ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಳದ ಅಧಿವೇಶನದ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೇಡಿಕೆಗಳಿಗೆ ಸೂಕ್ತವಾಗಿ ಸರಕಾರ ಸ್ಪಂದಿಸಲಿದೆ ಎನ್ನುವ ಭರವಸೆಯನ್ನು ಸಚಿವರು ನೀಡಿದರು.

​ಸಚಿವರು ನಮ್ಮ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಅವರ ಭರವಸೆಯ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯುತ್ತಿರುವುದಾಗಿ ಸಂಘದ ರಾಜ್ಯ ಅಧ್ಯಕ್ಷ ಫಕೀರ ಗೌಡ ಪಾಟೀಲ ತಿಳಿಸಿದರು. 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button