Kannada NewsKarnataka NewsLatest

*BREAKING: ಚಿತ್ರಮಂದಿರದಲ್ಲಿ ಬೆಂಕಿ ಅವಘಡ: ಪಿಠೋಪಕರಣಗಳು ಸುಟ್ಟು ಭಸ್ಮ*

ಪ್ರಗತಿವಾಹಿನಿ ಸುದ್ದಿ: ಗದಗ ನಗರದಲ್ಲಿರುವ ಶಾಂತಿ ಚಿತ್ರಮಂದಿರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಡೀ ಚಿತ್ರಮಂದಿರ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ.

ಚಿತ್ರ ಮಂದಿರದಲ್ಲಿದ್ದ ಕುರ್ಚಿ, ಪಿಠೋಪಕರಣಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Related Articles

Back to top button