Kannada NewsKarnataka News

ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಸಚಿವೆ, ಸಂಸದ

ಪ್ರಗತಿವಾಹಿನಿ ಸುದ್ದಿ, ಯಕ್ಸಂಬಾ –  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ  ತಮ್ಮ ಯಕ್ಸಂಬಾ ಗ್ರಾಮದ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದರು.

ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರೈತರ ಹಾಗೂ ಗ್ರಾಮದ ಮುಖಂಡರು ಸಮಸ್ಯೆಗಳನ್ನು ಆಲಿಸಿ ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು.

Home add -Advt

 

ಎಲ್ಲ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರ ಬೇಡಿಕೆಗಳಿಗೆ ಸ್ಪಂದಿಸಿದರು. ಸ್ವೀಕರಿಸಿದ ಪತ್ರಗಳನ್ನು ಪರಿಶೀಲನೆ ನಡೆಸಿ ಅವುಗಳನ್ನು ಗಣನೆಗೆ ತೆಗೆದುಕೊಂಡು ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು. ಸಾಧ್ಯವಾದವುಗಳನ್ನು ಅಲ್ಲೇ ಪರಿಹರಿಸುವ ಪ್ರಯತ್ನ ಮಾಡಿದರು.

Related Articles

Back to top button