Latest

ಹೈಕಮಾಂಡ್ ನಿರ್ಧಾಕ್ಕೆ ಬದ್ಧ ಎಂದ ಸಚಿವ ನಿರಾಣಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಮುರುಗೇಶ್ ನಿರಾಣಿ, ಇಳಿವಯಸ್ಸಿನಲ್ಲಿಯೂ ಸಿಎಂ ಯಡಿಯೂರಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಿರಾಣಿ, ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕೆಲ ಸಚಿವರು ಪ್ರತ್ಯೇಕ ಸಭೆ ನಡೆಸುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಯಡಿಯೂರಪ್ಪನವರು ಇಳಿವಯಸ್ಸಿನಲ್ಲೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಅವರೇ ಮುಂದುವರಿಯಬೇಕು ಎಂದರು.

ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಕುರ್ಚಿ ಖಾಲಿಯಿದ್ದರೆ ಈ ಬಗ್ಗೆ ಮಾತನಾಡಬಹುದು. ಆದರೆ ಸದ್ಯಕ್ಕೆ ಖಾಲಿಯಿಲ್ಲ. ಏನೇ ಇದ್ದರೂ ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದರು.
ನಾಯಕತ್ವ ಬದಲಾವಣೆ; ಅಚ್ಚರಿ ಹೇಳಿಕೆ ನೀಡಿದ ಆರ್.ಅಶೋಕ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button