ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ.
ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.
ರಮೇಶ್ ಸಾವಿಗೆ ಸುರೇಶ ಕುಮಾರ ಕಂಬನಿ ಮಿಡಿದಿದ್ದಾರೆ.
ಸ್ವಯಂಪ್ರೇರಣೆಯಿಂದ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಧಿಕಾರಿ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ