
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಾಣಂತಿಯರ ಸರಣಿ ಸಾವಿನ ಪ್ರಕರಣ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ ಎಂದು ಬಾಣಂತಿಯರ ಸರಣಿ ಸಾವಿಗೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಮನೆಗೆ ಪುಟ್ಟ ಕಂದನ ಆಗಮನದ ಖುಷಿಯಲ್ಲಿದ್ದ ಎಷ್ಟೋ ಕುಟುಂಬಗಳು ಈಗ ಮಗಳನ್ನ ಕಳೆದುಕೊಂಡು ಕಣ್ಣೀರು ಹಾಕುತ್ತಿವೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ. ಇಷ್ಟೆಲ್ಲಾ ಘಟನೆಗಳಿಗೆ ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಕಾರಣ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ತನ್ನ ತಪ್ಪಿಗೆ ಕೇಂದ್ರವನ್ನು ದೂರುವುದು ಸರಿಯಲ್ಲ. ಐವಿ ದ್ರಾವಣ ಸ್ಯಾಂಪಲ್‌ಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದರೂ ಪಕ್ಕದ ರಾಜ್ಯಗಳಲ್ಲಿ ಯಾಕೆ ಈ ರೀತಿಯ ಸಮಸ್ಯೆ ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ