Kannada NewsKarnataka NewsPolitics

*ಚುನಾವಣಾ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಸಚಿವ ರಾಜಣ್ಣ*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಯ ಕೂಗಿನ ಪೈಪೋಟಿಯಲ್ಲಿ ಮುಂಚೂಣಿಯಲ್ಲಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರು ಚುನಾವಣಾ ರಾಜಕಾರಣದಿಂದ ದೂರ ಉಳಿದುಕೊಳ್ಳುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಮುಂಬರುವ ದಿನಗಳಲ್ಲಿ ತಾವು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾಗಿ ಹೇಳಿದ್ದು ಸಕ್ರಿಯ ರಾಜಕಾರಣದಲ್ಲಿ ಮಾತ್ರ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಅವರ ಈ ನಿರ್ಧಾರಕ್ಕೆ ನಿಖರ ಕಾರಣ ಏನು ಎಂಬುವುದು ಸದ್ಯ ತಿಳಿಸಿಲ್ಲ.

ಇನ್ನು ಪಕ್ಷಕ್ಕಾಗಿ ದುಡಿಯುವುದರ ಜೊತೆಗೆ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದಾರೆ. ಇದಲ್ಲದೇ ತಮ್ಮ ಬಹುಕಾಲದ ಕನಸು, ತಮ್ಮ ಸ್ವಕ್ಷೇತ್ರ ಮಧುಗಿರಿಯನ್ನು ಅಧಿಕಾರದ ಅವಧಿಯೊಳಗೆ ಜಿಲ್ಲಾ ಕೇಂದ್ರವಾಗಿ ಮಾಡೇ ತೀರುತ್ತೇನೆ ಎಂದು ಶಪಥವೂ ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button