Film & EntertainmentKannada NewsKarnataka News

*ನಟ ನಾಗಭೂಷಣ್ ಕಾರು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ನಟ ನಾಗಭೂಷಣ್ ಅವರ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.

ತಡರಾತ್ರಿ ಈ ಅಪಘಾತ ಸಂಭವಿಸಿದೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ವೃದ್ಧ ದಂಪತಿಗೆ ನಟನ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ್ದಾರೆ.

Home add -Advt

ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಪ್ರೇಮಾ (48) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾರು ಹಾಗೂ ನಟ ನಾಗಭೂಷಣ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button