ಪ್ರಗತಿವಾಹಿನಿ ಸುದ್ದಿ, ಗೋಕಾಕ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಆಗಸ್ಟ್ ೭ ರಿಂದ ೧೦ ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಆ.೭ ರಂದು ಬೆಳಗ್ಗೆ ೧೧ ಗಂಟೆಗೆ ಬೆಳಗಾವಿ ನಗರದ ಪರಿವೀಕ್ಷಣಾ ಮಂದಿರದಲ್ಲಿ ಕೋವಿಡ್-೧೯ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.
ಆ.೮ ರಂದು ಬೆಳಗ್ಗೆ ೧೦.೩೦ಕ್ಕೆ ಚಿಕ್ಕೋಡಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಿದ ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಆ.೯ ರಂದು ಗೋಕಾಕ ನಗರದಲ್ಲಿ ಬೆಳಗ್ಗೆ ೧೦ ಗಂಟೆಗೆ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಲಿದ್ದಾರೆ. ಆ.೧೦ ರಂದು ಬೆಳಗಾವಿ ನಗರದ ಪರಿವೀಕ್ಷಣಾ ಮಂದಿರರದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ