Kannada NewsKarnataka NewsLatest
ನಾಳೆ ಉನ್ನತಮಟ್ಟದ ಸಭೆ ನಡೆಸಲಿರುವ ಸಚಿವ ರಮೇಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಜಾರಕಿಹೊಳಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಕಳಸಾ ಬಂಡೂರಿ ಮತ್ತು ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಮತ್ತು ಇತರೆ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯ ತೀರುವಳಿ ಪಡೆಯುವ ಕುರಿತು ಈ ಉನ್ನತ ಮಟ್ಟದ ಸಭೆ ನಡೆಯಲಿದೆ.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯುವುದು.
ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಗಳ ದೃಷ್ಟಿಯಿಂದ ಈ ಸಭೆ ಮಹತ್ವ ಪಡೆದಿದೆ.




