
ರಾಜಕೀಯ ಕಾರಣಗಳಿಗಾಗಿ ಈ ಸಭೆ ಮಹತ್ವ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಬೆಳಗಾವಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬೆಳಗಾವಿ ತಾಲ್ಲೂಕು ಪಂಚಾಯತಿ ಸಭಾಭವನದಲ್ಲಿ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾದ ನಂತರ ಇದೇ ಮೊದಲ ಬಾರಿಗೆ ತಾಲೂಕೊಂದರ ಪ್ರಗತಿ ಪರಿಶೀಲನೆ ನಡೆಸುತ್ತಿದ್ದು, ರಾಜಕೀಯ ಕಾರಣಗಳಿಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಸಚಿವರು ಮಧ್ಯಾಹ್ನ 1 ಗಂಟೆಗೆ ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಸಂಬಂಧಿಸಿದಂತೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳೊಂದಿಗೆ ಬಳ್ಳಾರಿ ನಾಲಾ ಪರಿವೀಕ್ಷಣೆ ಮಾಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ