ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಿಜೆಪಿ ಟಿಕೆಟ್ ಕೈತಪ್ಪಿದ ಬೆನಲ್ಲೇ ಕೆಲ ನಾಯಕರು ಪಕ್ಷ ತೊರೆಯುತ್ತಿದ್ದರೆ, ಇನ್ನು ಕೆಲ ಮುಖಂಡರು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೆನ್ನಲ್ಲೇ ಇದೀಗ ಸಚಿವ ಎಸ್.ಅಂಗಾರ ಸರದಿ. ಹೌದು ಸಚಿವ ಎಸ್.ಅಂಗಾರ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ.
ದಕ್ಷಿಣ ಕನ್ನದ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಚಿವ ಎಸ್.ಅಂಗಾರ ಅವರಿಗೆ ಬಿಜೆಪಿ ಶಾಕ್ ನೀಡಿದ್ದು, ಸುಳ್ಯದಲ್ಲಿ ಅಂಗಾರ ಅವರ ಬದಲಿಗೆ ಬಾಗೀರಥಿ ಮುರುಳಯ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಬೇಸತ್ತ ಸಚಿವ ಎಸ್.ಅಂಗಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಸುಳ್ಯದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್.ಅಂಗಾರ ಕಳೆದ ಎರದು ವರ್ಷಗಳಿಂದ ಮೀನುಗಾರಿಕಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸೋಲಿಲ್ಲದ ಸರದಾರ ಎಂಬ ಖ್ಯಾತಿಗಳಿಸಿದ್ದ ಅಂಗಾರ ಅವರಿಗೆ ಈಬಾರಿ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಸಚಿವರು ಸಕ್ರಿಯರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಈಬಾರಿ ವಿಧಾನಸಭಾ ಚುನಾವಣಾ ಪ್ರಚರದಿಂದಲೂ ದೂರ ಉಳಿಯುವುದಾಗಿ ತಿಳಿಸಿದ್ದಾರೆ.
https://pragati.taskdun.com/d-k-shivakumarbjp-leader-padmarajcongress-join/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ