Kannada NewsKarnataka News

ಸಚಿವ ಸತೀಶ ಜಾರಕಿಹೊಳಿ ಸಹೋದರಿ, ಗೋಕಾಕ ನಗರಸಭೆ ಮಾಜಿ ಉಪಾಧ್ಯಕ್ಷೆ ನಿಧನ 

ಪ್ರಗತಿವಾಹಿನಿ ಸುದ್ದಿ, ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಸತೀಶ್‌ ಜಾರಕಿಹೊಳಿಯವರ ಹಿರಿಯ ಸಹೋದರಿ, ಗೋಕಾಕ ನಗರಸಭೆ ಮಾಜಿ ಉಪಾಧ್ಯಕ್ಷೆ ಲಗಮವ್ವಾ ನಿಂಗಪ್ಪಾ ಸುಲಧಾಳ (67) ಹೃದಯಾಘಾತದಿಂದ ಇಂದು ಬೆಳಗ್ಗೆ 8:00 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ, ಇಬ್ಬರು ಪುತ್ರರು, ಓರ್ವ ಸುಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತ ಲಗಮವ್ವಾ ನಿಂಗಪ್ಪಾ ಸುಲಧಾಳ ಅವರು ಗೋಕಾಕ ನಗರಸಭೆ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
 ಮಾತೃಹೃದಯದ ಸಹೋದರಿ ಲಗಮವ್ವಾ  ಸರಳತೆ ಹಾಗೂ ಸೌಜನ್ಯತೆಯ ಆಗರವಾಗಿದ್ದರು. ಬಾಲ್ಯದಿಂದಲೂ ನಮಗೆಲ್ಲ ಪ್ರೇರೇಪಿಸಿ ಪ್ರೋತ್ಸಾಹಿಸಿ ಬೆಳೆಸಿದ್ದರು. ಅವರ ಮಾರ್ಗದರ್ಶನವು ನನ್ನ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರವಹಿಸಿತ್ತು. ನನ್ನ ತಾಯಿ ಸ್ವರೂಪಳಾಗಿದ್ದ ಸಹೋದರಿಯನ್ನು ಕಳೆದುಕೊಂಡು ತೀವ್ರ ಆಘಾತವನ್ನುಂಟುಮಾಡಿದೆ. ಭಗವಂತನು ಅವರ ಪವಿತ್ರ ಆತ್ಮಕ್ಕೆ ಶಾಂತಿಯನ್ನು ನೀಡಲೆಂದು ಸಚಿವ ಸತೀಶ್‌ ಜಾರಕಿಹೊಳಿ ದುಃಖ ವ್ಯಕ್ತಪಡಿಸಿದ್ದಾರೆ.

 

ಕಾಂಗ್ರೆಸ್ ಸರಕಾರದಿಂದ ಕ್ರಾಂತಿಕಾರಕ ಯೋಜನೆಗಳ ಘೋಷಣೆ; ಎಲ್ಲಾ ಗ್ಯಾರಂಟಿ ಜಾರಿ

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button