Belagavi NewsBelgaum NewsKannada NewsKarnataka NewsPolitics
*ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆಗೆ ಸಚಿವ ಸತೀಶ್ ಜಾರಕಿಹೊಳಿ ಸಲಹೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಯೂರಿಯಾ ರಸಗೊಬ್ಬರದ ಬಳಕೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಕೆಯ ಕುರಿತು ಜಾಗೃತಿ ಮೂಡಿಸುವ ಹಸ್ತಪತ್ರಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶನಿವಾರ(ಆ.9) ಗೋಕಾಕದ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಸಚಿವರು, ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಹಾಳಾಗುತ್ತದೆ. ಆದ್ದರಿಂದ ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಎಚ್.ಡಿ.ಕೊಳೆಕರ್ ಅವರು, ಯೂರಿಯಾ ರಸಗೊಬ್ಬರಗಳ ದುಷ್ಟಪರಿಣಾಮದ ಕುರಿತು ಹಾಗೂ ಯೂರಿಯಾ ರಸಗೊಬ್ಬರದ ದಾಸ್ತಾನಿನ ಕುರಿತು ಮತ್ತು ನಾನೋ ಯೂರಿಯಾ ಬಳಕೆಯ ಕುರಿತು ಸಚಿವರಿಗೆ ವಿವರಿಸಿದರು.
ಗೋಕಾಕದ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ.ನದಾಫ್, ವಿನಾಯಕ್ ತುರಾಯಿದಾರ ಹಾಗೂ ಅಧಿಕಾರಿಗ ಪ್ರಕಾಶ ಪಾಟೀಲ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.